ಯಾರಿಗೆ ಹೇಳೋಣ ನಮ್ ಪ್ರಾಬ್ಲಂ !

ಶಿವಮೊಗ್ಗ : ಅಕ್ಷರ ದಾಸೋಹ ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿ ಸಮಸ್ಯೆಗಳ ಕುರಿತಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೌಂಡೇಶನ್ ವತಿಯಿಂದ ಮಾಧ್ಯಮಗೋಷ್ಠಿ ನಡೆಸಲಾಯಿತು.

ಈ ಕುರಿತು ಮಾತನಾಡಿದ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೌಂಡೇಶನ್‌ನ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ರಾಜ್ಯದಲ್ಲಿ ಒಂದು ಲಕ್ಷ ಹದಿನೆಂಟು ಸಾವಿರ ಹೆಣ್ಣುಮಕ್ಕಳು ಈ ಯೋಜನೆಯ ಅಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ, ಕೇಂದ್ರ ಸರ್ಕಾರ 2003ರಿಂದ 750 ರೂಪಾಯಿ ಕೊಡ್ತಾಯಿತ್ತು. ಆದ್ರೆ ಈಗ ಅದರಲ್ಲೂ 100 ರೂಪಾಯಿ ಕಡಿತಗೊಳಿಸಿ ೬೦೦ ರೂಪಾಯಿ ನೀಡ್ತಾಯಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ಸಿಬ್ಬಂದಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು. ಹಾಗೂ ರಾಜ್ಯ ಸರ್ಕಾರ ಕನಿಷ್ಠ ವೇತನ ಜಾರಿಗೆ ಮಾಡಿದ್ರು ಸಹ ಅದನ್ನ ಸರಿಯಾಗಿ ಕೊಡ್ತಾಯಿಲ್ಲ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಆಗ್ರಹಿಸಿದ್ರು.