ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿಣಿ ಸಭೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಭೆಯಲ್ಲಿ ರಾಜ್ಯ ಪ್ರಕೋಷ್ಟದ ಸಂಯೋಜಕ ಎಂ.ಬಿ.ಭಾನುಪ್ರಕಾಶ್, ಎಂಎಲ್‌ಸಿಗಳಾದ ಆಯನೂರ್ ಮಂಜುನಾಥ್, ಎಸ್.ರುದ್ರೇಗೌಡ, ರಾಜ್ಯ ಪ್ರಶಿಕ್ಷಣ ಪ್ರಕೋಷ್ಟದ ಸಹ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ, ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.