ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ 

ಶಿವಮೊಗ್ಗ : ಏಪ್ರಿಲ್ 24ರಂದು ನಡೆಯಲಿರುವ ಬೋವಿ ಸಮಾಜದ ಸಮುದಾಯ ಭವನ ಉದ್ಘಾಟನೆ ಮತ್ತು ಬೋವಿ ಸಮಾಜ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದ್ದು, ಎನ್.ಇ.ಎಸ್ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಬೋವಿ ಸಮಾಜದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪೂಜೆಯನ್ನು ನೆರವೇರಿಸಿಕೊಟ್ಟರು.

ಈ ವೇಳೆ ಸಮಾಜದ ಮುಖಂಡರಾದ ರವಿಕುಮಾರ್, ವೀರಭದ್ರಪ್ಪ ಪೂಜಾರಿ, ರಾಮಕೃಷ್ಣಪ್ಪ, ಧೀರರಾಜ್ ಹೊನ್ನವಿಲೆ ಮತ್ತಿತರರು ಹಾಜರಿದ್ದರು.