ಮತ್ತೆ ಸಂಪುಟ ಸೇರುತ್ತಾರೆ ಈಶ್ವರಪ್ಪ - ಬಿಎಸ್‌ವೈ 

ಶಿವಮೊಗ್ಗ : ಸರ್ಕಾರಕ್ಕೆ ಮುಜಗಾರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಘೋಷಿಸುತ್ತಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಇದೇ ಮಾತನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು.

ಆದರೆ ಈಶ್ವರಪ್ಪ ಒತ್ತಾಯಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು ಅನಿವಾರ್ಯ ಕಾರಣದಿಂದ ರಾಜೀನಾಮೆ ನೀಡಿದ್ದಾರೆ. ಮತ್ತೆ ಸಂಪುಟ ಸೇರುವ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದ್ರು.