ಶಿವಮೊಗ್ಗ : ಕೇಂದ್ರದ ನರೇಂದ್ರ ಮೋದಿ ಸರ್ಕಾರ ೮ ವರ್ಷವನ್ನು ಪೂರೈಸಿದೆ. ಈ ಹಿನ್ನೆಲೆ ಸರ್ಕಾರದ ಕಾರ್ಯಗಳು ಹಾಗೂ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯಗಳು ನಡೆಯುತ್ತಿವೆ. ಆದ್ದರಿಂದ ಸಂಸದ ಬಿ.ವೈ.ರಾಘವೇಂದ್ರ ಮಾಧ್ಯಮಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ಕಾರ್ಯಗಳನ್ನು ಎಳೆ ಎಳೆಯಾಗಿ ವಿವರಿಸುವ ಪ್ರಯತ್ನ ಮಾಡಿದರು.
ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಸಾಧನೆ, ಭಾರತದ ರಾಜತಾಂತ್ರಿಕ ನೀತಿ, ದೇಶದ ಭದ್ರತಾ ವಿಚಾರವಾಗಿ ಏನೆಲ್ಲಾ ಕ್ರಮಗಳನ್ನು ಕೈಗೊಳಲಾಗಿದೆ. ಪ್ರವಾಸೋಧ್ಯಮ, ಶಿಕ್ಷಣ, ಕೃಷಿ ಹೇಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಯಾವ್ಯಾವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಜೊತೆಗೆ ಸರ್ಕಾರ ವೈಫಲ್ಯಗಳ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಕೂಡ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿತ್ತು. ಆದ್ರೆ ಅದನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಮುಟ್ಟಿಸಲು ಕೆಲವು ಕೊರತೆಗಳಾಗಿದ್ದವು. ಹೀಗಾಗಿ ಮೋದಿ ಸರ್ಕಾರದ ಕಾರ್ಯಗಳನ್ನು ಎಲ್ಲರಿಗೂ ಮುಟ್ಟಿಸಲಾಗುತ್ತಿದೆ ಎಂದರು.