ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ.ಗಿರೀಶ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೇ 16 ರಂದು ಬೆಂಗಳೂರಿನಿಂದ ಆಗಮಿಸಿದ ಅವರು ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.
ಬಳಿಕ ಶಿವಮೊಗ್ಗದಲ್ಲಿ ಸ್ಥಳೀಯ ಉಪ್ಪಾರ ಸಮಾಜದವರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದ್ದಾರೆ ಹಾಗೂ ಆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆಯನ್ನು ಸಮಾಜದ ಜನತೆಗೆ ನೀಡಿದ್ದಾರೆ. ಜಿಲ್ಲಾ ಪ್ರವಾಸದ ವೇಳೆ ಅವರಿಗೆ ಶಿವಮೊಗ್ಗದ ಉಪ್ಪಾರ ಸಮಾಜದ ಪ್ರಮುಖರು ಸಾಥ್ ನೀಡಿದ್ದಾರೆ.