ಶಿವಮೊಗ್ಗ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜೂನ್ ೩೦ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಕೌಶಲಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಡಿವಿಎಸ್ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.
ಮೇಳಕ್ಕೆ 20ಕ್ಕು ಹೆಚ್ಚು ಸ್ಥಳೀಯ ಕಂಪನಿಗಳು ಭಾಗವಹಿಸಲಿವೆ. ಅಭ್ಯರ್ಥಿಗಳು ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು ಅಥವಾ ಆನ್‌ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು. ಉದ್ಯೋಗ ಮೇಳದ ದಿವ್ಯ ಸಾನಿಧ್ಯವನ್ನು ಗೌರುಗದ್ದೆಯ ಅವದೂತ ಶ್ರೀ ವಿನಯ್ ಗುರೂಜಿ ವಹಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮೇಳವನ್ನು ಉದ್ಘಾಟಿಸಲಿದ್ದು ಸಂಸದ ಬಿ.ವೈ.ರಾಘವೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.