ಮಕ್ಕಳ ಸಹಾಯವಾಣಿ 1098 ದಿನಾಚರಣೆ ಕಾರ್ಯಕ್ರಮ 

ಶಿವಮೊಗ್ಗ : ಗಾಡಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಹಾಯವಾಣಿ ೧೦೯೮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಕ ಮಾತನಾಡಿದ ಅವರು ಮಕ್ಕಳ ಸಹಾಯವಾಣಿಯ ಮಹತ್ವನ್ನು ವಿವರಿಸಿದರು. ಇನ್ನು ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಿವಮೊಗ್ಗದ ಮಕ್ಕಳ ಸಹಾಯವಾಣಿ ನಿರ್ದೇಶಕ ಡಾ.ಫಾ.ಅಬ್ರಹಂ ವಹಿಸಿಕೊಂಡಿದ್ದರು.