ಶಿವಮೊಗ್ಗ: ಸಂರಕ್ಷಣೆ, ಮರಣ ಪರಿಹಾರ, ಕನಿಷ್ಠವೇತನ, ಪಿಂಚಣಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಆಶಾ ಕಾರ್ಯಕರ್ತೆಯರ ಸಂಘದಿAದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೋವಿಡ್ ಆರಂಭವಾಗಿ ಎರಡನೇ ಅಲೆ ಹಾಗೂ ಸಂಭವನೀಯ ಮೂರನೇ ಅಲೆ ತಪ್ಪಿಸುವಲ್ಲಿ ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ನಿರ್ದೇಶನದಂತೆ ನಮ್ಮ ಪ್ರಾಣವನ್ನೂ ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿದ್ದೇವೆ. ೨೪ ಗಂಟೆಯೂ ಕೆಲಸ ಮಾಡಿದ್ದೇವೆ. ಆದರೂ ನಮಗೆ ಎರಡನೇ ಅಲೆಯಲ್ಲಿ ಸೂಕ್ತ ರಕ್ಷಣಾ ಸಾಧನಗಳಾಗಲಿ, ಫೇಸ್ ಮಾಸ್ಕ್ ಹಾಗೂ ಇತರೆ ಸಾಮಗ್ರಿಗಳನ್ನು ನೀಡಿಲ್ಲ. ಸರ್ಕಾರ ಹಾಗೂ ಜನರ ನಡುವೆ ಕೊಂಡಿಯಾಗಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಆದರೂ ಸರ್ಕಾರ ನಮ್ಮನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ರು.