ಶಿವಮೊಗ್ಗ: ರಾಜ್ಯಾದ್ಯಂತ ಕೊರೊನಾ ವೈರಸ್‌ನಿಂದ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಸರ್ಕಾರ ಎಲ್ಲಾ ಶಾಲಾ-ಕಾಲೇಜುಗಳನ್ನು ಕೊರೊನಾ ಸೋಂಕು ಕಡಿಮೆಯಾಗುವವರೆಗೂ ಬಂದ್ ಮಾಡಲು ಆದೇಶಿಸಿತ್ತು. ಅದರಂತೆ ಕಳೆದ ತಿಂಗಳಿAದ ೯ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳು ಪುನಾರಂಭವಾಗಿವೆ.
ಪ್ರಾಥಮಿಕ ಶಾಲೆಯ ಮಕ್ಕಳ ಶಾಲೆಗಳು ಕೋವಿಡ್ ಸಂಪೂರ್ಣ ಹತೋಟಿಗೆ ಬರುವತನಕ ಪ್ರಾರಂಭವಾಗಿರಲಿಲ್ಲ. ಆದರೆ ಇಂದಿನಿAದ ಗಣನೀಯವಾಗಿ ಕೋವಿಡ್ ಹತೋಟಿಯಲ್ಲಿರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಆದೇಶಿಸಿದೆ. ಅದರಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಹ ೬ನೇ ತರಗತಿಯಿಂದ ಶಾಲೆಗಳು ಪ್ರಾರಂಭವಾಗಿದ್ದು, ನಗರದ ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಕೋವಿಡ್ ಲಾಕ್‌ಡೌನ್ ನಂತರ ಮೊಟ್ಟಮೊದಲ ಬಾರಿಗೆ ಶಾಲೆಗೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಲೋಹಿತ್ ಕುಮಾರ್, ಶಿಕ್ಷಕರಾದ ಪದ್ಮಾವತಿ, ಎನ್.ಟಿ.ರವಿಕುಮಾರ್ ಉಪಸ್ಥಿತರಿದ್ದರು.