ದೆಹಲಿ : ಏಪ್ರಿಲ್ 16 ಹಾಗೂ 17 ರಂದು ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಇದರ ಪೂರ್ವಭಾವಿ ತಯಾರಿ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸಲಾಗಿದೆ. ಈ ಬಾರಿಯ ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದು ಸಿ.ಎಂ.ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ದಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯದ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ ಎಂದರು.