ಬೆಂಗಳೂರು : ಕಾನೂನು ಕೈಗೆ ತೆಗೆದುಕೊಳ್ಳುವಂತಹ ಸಂಘಟನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಿದ್ರೆ, ಕರ್ನಾಟಕದ ಜನ ಸಹಿಸೋದಿಲ್ಲ ಹಾಗೂ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಹಾಗೇನೆ, ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಸಂಬಂಧ ಈಗಾಗಲೇ ಪೊಲೀಸರು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಘಟನೆಗೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದಿದ್ದಾರೆ.