ಬೆಂಗಳೂರು : 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರವನ್ನು ಮತ್ತಷ್ಟು ಏರಿಕೆ ಮಾಡಲಾಗಿದೆ. ಈ ಮೂಲಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಸಂಕಷ್ಟದ ನಡುವೆ ಗ್ರಾಹಕರ ಜೇಬಿಗೆ ಮತ್ತೆ ಹೊರೆ ಬಿದ್ದಿದೆ.
ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯಲ್ಲಿ 250 ರೂ ಏರಿಕೆ ಮಾಡಲಾಗಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ. ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2252 ರೂ. ಪಾವತಿ ಮಾಡಬೇಕಾಗಿದೆ.