ಶಿವಮೊಗ್ಗ : ಮಲೆನಾಡ ಹೆಮ್ಮೆ, ಗಮಕ ಗಂಧರ್ವ, ಪದ್ಮಶ್ರೀ ಪುರಸ್ಕೃತ ಹೊಸಳ್ಳಿ ಕೇಶವಮೂರ್ತಿಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೇ ೨೮ರ ಶನಿವಾರದಂದು ಕುವೆಂಪು ರಂಗಮಂದಿರದಲ್ಲಿ ಕೇಶವಮೂರ್ತಿ ನಾಗರೀಕ ಅಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರ್‍ನಹಳ್ಳಿ ಹಾಗೂ ಆಧ್ಯಾತ್ಮ ಚಿಂತಕ ಹಿರೇಮಗಳೂರು ಕಣ್ಣನ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನು ಮಾಜಿ ಶಾಸಕ ವೈ.ಎಸ್.ವಿ.ದತ್ತ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಮತ್ತಿತರ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಅದೇ ದಿನ ಸಂಜೆ ಮಹಾವೀರ ವೃತ್ತದಿಂದ ಕುವೆಂಪು ರಂಗಮಂದಿರದ ತನಕ ಶೋಭಾಯಾತ್ರೆ ಏರ್ಪಡಿಸಲಾಗಿದೆ ಎಂದು ಅಭಿನಂದನಾ ಸಮಿತಿಯಿಂದ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದರು.