ಶಿವಮೊಗ್ಗ: ಆಶಾ ಕಾರ್ಯಕರ್ತರು ಕೋವಿಡ್ ಸಮಯದಲ್ಲಿ ಗ್ರಾಮೀಣ ಭಾಗದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ತಮ್ಮ ಜೀವದ ಹಂಗು ತೊರೆದು ಜನರ ಆರೋಗ್ಯವನ್ನು ಹಗಲಿಳೆನ್ನದೇ ಕಾಪಾಡಿದ ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಡಾ.ಧನಂಜಯ್ ಸರ್ಜಿ ಬುಧವಾರದಂದು ಕುವೆಂಪು ರಂಗಮಂದಿರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ಈ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಸರ್ಜಿ ಆರೋಗ್ಯ ಕಾರ್ಡ್ ಮತ್ತು ಚೈತನ್ಯ ಫೌಂಡೇಷನ್ ವತಿಯಿಂದ ಕೋವಿಡ್ ಕಿಟ್ ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಮಾಧ್ಯಮಗೋಷ್ಠಿಯಲ್ಲಿ ಚೈತನ್ಯ ಫೌಂಡೇಶನ್ ಸಿಇಓ ಬಿ.ಟಿ. ಭದ್ರೇಶ್, ಸರ್ಜಿ ಫೌಂಡೇಷನ್‌ನ ನಿರ್ದೇಶಕರಾದ ನಮಿತಾ ಸರ್ಜಿ ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ಆಡಳಿತಾಧಿಕಾರಿ ಪುರುಷೋತ್ತಮ್ ಕೆ.ಆರ್. ಉಪಸ್ಥಿತರಿದ್ದರು.