ಬೆಂಗಳೂರು: ವಿಧಾನಸಭಾ ಅಧಿವೇಶನದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಪಂಚೆ ಕಳಚಿರುವುದರ ಕುರಿತು ಬಿಜೆಪಿ ನಾಯಕರು ಲೇವಡಿ ಮಾಡಿರೋದಕ್ಕೆ ಕಾಂಗ್ರೆಸ್‌ನವರು ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಅಕೌಂಟ್‌ನಲ್ಲಿ ಪಂಚೆ ಈ ನೆಲದ ಸಂಸ್ಕೃತಿ ಪ್ರತೀಕ, ಶ್ರಮಜೀವಿಗಳ ಸಂಗಾತಿ, ಪಂಚೆ ಕಳಚುವುದು ಎತ್ತಿ ಕಟ್ಟುವುದು ಸಹಜ. ಅದೇ ಕರುನಾಡ ಮಣ್ಣಿನ ಮಕ್ಕಳ ಗತ್ತು. ಕಂಡ ಕಂಡಲ್ಲಿ ತಮ್ಮ ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಪಂಚೆ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಆಕಸ್ಮಿಕವಾಗಿ ಪಂಚೆ ಕಳಚೋದು ಸಹಜ. ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟನ್ನು ತಾವೇ ಕಳಚುವುದು ಅಸಹ್ಯ. ವಿಡಿಯೋ ಮಾಡಿಕೊಳ್ಳೋದು, ಸಿಡಿಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ ಎಂದು ಟ್ವಿಟ್ ಮಾಡಲಾಗಿದೆ.