ಶಿವಮೊಗ್ಗ : ಬಡವರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌ಗಳ ವ್ಯವಸ್ಥೆ ಹಾಳಾಗಿದೆ ಎಂಬ ದೂರುಗಳು ಕೇಳಿ ಬರ‍್ತಾಯಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಅಲ್ಲಿಯೇ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿದ್ರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ 4 ನಾಲ್ಕು ಕಡೆ ಇಂದಿರಾ ಕ್ಯಾಂಟೀನ್‌ಗಳದು ನಡೆಯುತ್ತಿದೆ. ಈ ಎಲ್ಲದರಲ್ಲಿಯೂ ಮೊದಲು ಕಾಂಗ್ರೆಸ್ ಸರ್ಕಾರವಿದ್ದಾಗ ನೀಡ್ತಾಯಿದ್ದ ಗುಣಮಟ್ಟ ಈಗಿಲ್ಲ. ಕ್ವಾಲಿಟಿ ಹಾಳಾಗಿರುವುದರಿಂದ ಇಲ್ಲಿಗೆ ಬರುವವರ ಸಂಖ್ಯೆ ಕೂಡ ಕಡಿಮೆಯಾಗಿದೆ ಎಂದರು.