ನಡು ರಸ್ತೆಯಲ್ಲಿ ಅಡುಗೆ ಮಾಡಿ, ಪ್ರಧಾನಿ ಮೋದಿ ಭಾವಚಿತ್ರ ಸುಟ್ಟು ಹಾಕುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಶಿವಮೊಗ್ಗದ ಯೂತ್ ಕಾಂಗ್ರೆಸ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸ್ತು. ಮಹಾವೀರ ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಹಾಕಿದರು. ಅಡುಗೆ ಅನಿಲ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಏರಿಕೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು. ಬಡ ಮತ್ತು ಮಧ್ಯಮ ವರ್ಗದವರು ಬದುಕುವುದೇ ದುಸ್ತರವಾಗಿದೆ. ಕೂಲಿ ಮಾಡಿ ಬದುಕುವವರು ಜೀವನ ನಡೆಸೋದು ಕಷ್ಟಕರವಾಗಿದೆ ಎಂದು ಕಿಡಿಕಾರಿದರು.
ಬೆಲೆ ಏರಿಕೆ ಬಿಸಿ - ಕಾಂಗ್ರೆಸ್ ಪ್ರತಿಭಟನೆ
