ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ 

ಭದ್ರಾವತಿ: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೌದೆ ಒಲೆ ಹಚ್ಚಿ ಬಸ್ಟಾಂಡ್ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ಭದ್ರಾವತಿ ನಗರ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ದಿನನಿತ್ಯ ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಹಾಗೂ ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಭದ್ರಾವತಿ ನಗರ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ ಪ್ರತಿಭಟಿಸಲಾಯಿತು.

ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ,  ಅಡುಗೆ ಅನಿಲದ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಮತ್ತೆ ಒಂದೇ ತಿಂಗಳಲ್ಲೇ ಎರಡು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾಡಿದೆ. ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆ ಎಳೆಯುತ್ತಿರುವುದು ತೀವ್ರ ಖಂಡನೀಯ ಎಂದು ಕಿಡಿಕಾರಿದ್ರು. ಪ್ರತಿಭಟನೆಯ ನೇತೃತ್ವವನ್ನು  ಭದ್ರಾವತಿಯ ಶಾಸಕರಾದ ಬಿ.ಕೆ.ಸಂಗಮೇಶ್ವರ್ ವಹಿಸಿದ್ದರು.