ಪಾದಯಾತ್ರೆಗೆ "ಕೈ" ಸಜ್ಜು

ಶಿವಮೊಗ್ಗ : ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ರೋಹಿತ್ ಚಕ್ರತೀರ್ಥ ಅವಮಾನ ಮಾಡಿದ್ದಾರೆ ಎನ್ನುವುದು ಪಠ್ಯ ಪರಿಷ್ಕರಣೆ ವಿಚಾರವಾಗಿ ಮೊದಲಿನಿಂದಲೂ ಕೇಳಿಬರ್‍ತಾಯಿರುವ ಆರೋಪ. ಈಗಾಗಲೇ ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧದ ಹೋರಾಟದ ಕಾವು ದಿನೇ ದಿನೇ ಜೋರಾಗ್ತಾಯಿದೆ.

ಈಗಾಗಲೇ ಕಾಂಗ್ರೆಸ್ ರಾಜ್ಯಾದ್ಯಂತ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದು, ಕುಪ್ಪಳಿಯಿಂದಲೆ ಸರ್ಕಾರಕ್ಕೆ ಒತ್ತಡ ಹೇರಲು ಕೈ ನಾಯಕರು ಮುಂದಾಗಿದ್ದಾರೆ. ಈ ಹಿನ್ನೆಲೆ ಮೇ 15ರಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈ ಕುರಿತು ಪಾದಯಾತ್ರೆಯ ನೇತೃತ್ವ ವಹಿಸಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ರೋಹಿತ್ ಚಕ್ರತೀರ್ಥ ವಿರುದ್ಧ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಪರಿಷ್ಕರಣ ಪಠ್ಯವನ್ನು ಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೆ ಮುಂದುವರೆಸಬೇಕು. ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಾಹಿತಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.