ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಇಡಿ ವಿಚಾರಣೆಯನ್ನು ಖಂಡಿಸಿ ರಾಜ್ಯದಲ್ಲಿಯೂ ಪ್ರತಿಭಟನೆ ಜೋರಾಗಿಯೇ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.
ಶಿವಮೊಗ್ಗದಿಂದಲು ಭದ್ರವಾತಿ ಶಾಸಕ ಬಿ.ಕೆ.ಸಂಗಮೇಶ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.