ಭಾರತದಲ್ಲಿ ತಗ್ಗಿದ ಕರೋನ ಅಲೆ 

ದೆಹಲಿ : ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಕಳೆದ ೨೪ ಗಂಟೆಗಳಲ್ಲಿ 1.096 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇನ್ನೂ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 81 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ಪಾಸಿಟೀವ್ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಿದ್ದು, ಕಳೆದ 24 ಗಂಟೆಯಲ್ಲಿ 1447 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್ ಶೇಕಡಾ 0.24 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.