ಅಂತಾರಾಜ್ಯ ವಾಹನ ಚಾಲಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ; ಸಚಿವ ಸೋಮಶೇಖರ್

ಕೇರಳ- ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು.

ಚಾಮರಾಜನಗರ, ಆ. 06: ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗಟಿವ್ ವರದಿಯನ್ನು ತಂದಿರಬೇಕು. ಒಂದು ವೇಳೆ ತರದೇ ಇದ್ದರೆ ಮುಲಾಜಿಲ್ಲದೆ ಅವರನ್ನು ವಾಪಸ್ ಕಳುಹಿಸಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.