ಶಿವಮೊಗ್ಗ : ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯ್ತು.
ಈ ಕಾಯ್ದೆಯು ಧಾರ್ಮಿಕ ಸ್ವಾತಂತ್ರದ ಹಕ್ಕನ್ನ ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ. ವಿಧಾನಸಭೆಯಲ್ಲಿ ತರಾತುರಿಯಲ್ಲಿ ಈ ಕಾಯ್ದೆಯನ್ನ ಅಂಗೀಕರಿಸಲಾಗಿದೆ. ವಿಧಾನ ಪರಿಷತ್‌ನಲ್ಲಿ ಸುಗ್ರೀವಾಙ ಮೂಲಕ ಕಾಯ್ದೆಯ ಅಂಗೀಕಾರಕ್ಕೆ ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದ ಕ್ರಮವನ್ನ ನಾವು ವಿರೋಧಿಸುತ್ತೇವೆ. ಹಾಗೆಯೆ ರಾಜ್ಯಪಾಲರು ಈ ಕಾಯ್ದೆಯ ಅಂಗೀಕಾರಕ್ಕೆ ಅನುಮತಿ ನೀಡಬಾರದೆಂದು ಪ್ರತಿಭಟನಾಕಾರರು ಆಗ್ರಹಿಸಿ, ಜಿಲ್ಲಾಧಿಕಾರಿ ಮುಖಾಂತರ ಮನವಿ ಪತ್ರ ಸಲ್ಲಿಸಿದ್ದಾರೆ.