ಹೊನ್ನಾಳಿ : ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸವಿನೆನವಿಗಾಗಿ ಹೊನ್ನಾಳಿ ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಸ್ನೇಹ ಜೀವಿ ಕ್ರಿಕೆಟರ್‍ಸ್ ವತಿಯಿಂದ ಈ ಪಂದ್ಯಾವಳಿ ಆಯೋಜನೆ ಮಾಡಿಲಾಗಿದೆ.
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸೋಲು ಗೆಲುವಿನಕ್ಕಿಂತ ಸ್ಪರ್ಧೆ ಬಹಳ ಮುಖ್ಯ. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಕರು ತೊಡಗಿಸಿಕೊಳ್ಳಬೇಕೆಂದರು.