ಶಿವಮೊಗ್ಗ : ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬಳಿಕ ಜಾರಿಯಲ್ಲಿದ್ದ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ ೬ರಿಂದ ಸಂಜೆ ೪ ರತನಕ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಬಂದ್ ಆಗಿದ್ದ ಅಂಗಡಿ ಮುಂಗಟ್ಟುಗಳು ಬಾಗಿಲು ತೆರದಿವೆ.
ಈ ಮೂಲಕ ಜನರು ತಮ್ಮ ಅಗತ್ಯ ವಸ್ತುಗಳನ್ನ ಕೊಂಡುಕೊಳ್ಳುತ್ತಿದ್ದಾರೆ. ಸಂಜೆ 4 ಗಂಟೆಯ ನಂತರ ಕರ್ಫ್ಯೂ ಮುಂದುವರಿಯಲಿದ್ದು, ಅಂಗಡಿ ಮುಂಗಟ್ಟುಗಳು ಕ್ಲೋಸ್ ಆಗಲಿವೆ. ಕಳೆದ ಮಂಗಳವಾರದಿಂದ ವ್ಯಾಪಾರ ವಹಿವಾಟು ಇಲ್ಲದೆ ಸಂಕಷ್ಟದಲ್ಲಿದ ವ್ಯಾಪಾರಸ್ಥರು ಕೊಂಚ ನಿರಾಳರಾಗಿದ್ದಾರೆ. ಅಂದ್ಹಾಗೆ ಶಾಲಾ-ಕಾಲೇಜುಗಳನ್ನು ಸೋಮವಾರದಿಂದ ಆರಂಭ ಮಾಡಲಾಗುವುದು ಹಾಗೂ ನಗರದಲ್ಲಿ ನಿಷೇಧಾಜ್ಞೆಯು ಫೆಬ್ರವರಿ 28ರ ಬೆಳಗ್ಗೆ 9 ಗಂಟೆಯ ತನಕ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.