ಕಾಲೇಜುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಎಸ್ಪಿ 

ಶಿವಮೊಗ್ಗ : ಹಿಜಾಬ್-ಕೇಸರಿ ಶಾಲು ಸಂಘರ್ಷದಿಂದಾಗಿ ಬಂದ್ ಆಗಿದ್ದ ಕಾಲೇಜುಗಳು ಪುನಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ ಎಸ್ಪಿ ಲಕ್ಷ್ಮೀಪ್ರಸಾದ್ ಕಾಲೇಜುಗಳಿಗೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲೆಯಲ್ಲಿ ಎಲ್ಲಾ ಕಡೆಯು ಶಾಂತ ವಾತಾವರಣವಿದೆ. ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಬಂದ ಕಡೆ ವೇಟಿಂಗ್ ರೂಂ ಸ್ಥಾಪಿಸಿದ್ದೇವೆ. ಅಲ್ಲಿ ಹಿಜಾಬ್ ತೆಗೆದಿಟ್ಟು ಹೋಗಲು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

ಎಸ್ಪಿ ಲಕ್ಷ್ಮೀಪ್ರಸಾದ್ ಮಾತನಾಡಿ, ಕೋರ್ಟ್ ಆದೇಶ ಪಾಲನೆ ಮಾಡದೇ ಇರುವವರು ವಾಪಸ್ ಹೋಗಿದ್ದಾರೆ. ಹಿಜಾಬ್ ತೆಗೆದು ಕಾಲೇಜು ಪ್ರವೇಶ ಮಾಡುವಂತೆ ಕಾಲೇಜು ಆಡಳಿತ ಮಂಡಳಿ ಹೇಳಿತ್ತು. ಆದರೆ ಇದಕ್ಕೆ ಒಪ್ಪದ ಕೆಲ ವಿದ್ಯಾರ್ಥಿನಿಯರು ಕೇಳದೇ ವಾಪಸ್ ಹೋಗಿದ್ದಾರೆ. ಎಲ್ಲಾ ಕಡೆಯಲ್ಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದರು.