ಶಿವಮೊಗ್ಗ : ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಕೇವಲ ಒಂದು ರೂಪಾಯಿಯಲ್ಲಿ ಎಸ್‌ಎಸ್‌ಎಲ್‌ಸಿ ಶಿಕ್ಷಣ ನೀಡುವ ಯೋಜನೆಯನ್ನು ದೆಹಲಿ ಇಂಟರ್ ನ್ಯಾಷನಲ್ ಸ್ಕೂಲ್ ರೂಪಿಸಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಫೌಂಡರ್ ಡೈರೆಕ್ಟರ್ ಎಸ್.ಬಿ.ಜಗದೀಶ್, 2013 ರಲ್ಲಿ ಹೊಳೆಹೊನ್ನೂರು ರಸ್ತೆಯ ಗುರುಪುರದಲ್ಲಿ ದೆಹಲಿ ಇಂಟರ್ ನ್ಯಾಷನಲ್ ಸ್ಕೂಲ್ ಆರಂಭವಾಗಿತು. ಶಾಲೆ ಪ್ರಾರಂಭವಾದಾಗಿನಿಂದಲೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಇದೀಗ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇವಲ ಒಂದು ರೂಪಾಯಿಯಲ್ಲಿ ಎಸ್‌ಎಸ್‌ಎಲ್‌ಸಿ ಶಿಕ್ಷಣ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.