೨ಎ ಮೀಸಲಾತಿಗಾಗಿ ಪಂಚಮಸಾಲಿಗಳ ಪಟ್ಟು 

ಶಿವಮೊಗ್ಗ : ಪಂಚಮಸಾಲಿ, ಗೌಡ, ಮಲೆಗೌಡ, ಹಾಗೂ ದೀಕ್ಷಾ ಲಿಂಗಾಯತರಿಗೆ ೨ಎ ಹಾಗೂ ಎಲ್ಲಾ ಸಮಾಜಗಳನ್ನ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ನಡೆಸಿದ ಚಳುವಳಿಗೆ ಒಂದು ವರ್ಷ ಪೂರೈಸಲಿದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ನಮ್ಮ ಚಳವಳಿಯು ಒಂದು ವರ್ಷ ಪೂರೈಸಿದ ಹಿನ್ನೆಲೆ ಸಂಕ್ರಾತಿ ದಿನದಂದು ಪಾದಯಾತ್ರೆಯ ವರ್ಷಾಚರಣೆ ಹಾಗೂ ಮೀಸಲಾತಿಗಾಗಿ ಪಂಚಮಸಾಲಿಗಳ ಜಾಗರಣೆ ಕಾರ್ಯಕ್ರಮವನ್ನು ಕೂಡಲ ಸಂಗಮದಲ್ಲಿ ಆಯೋಜಿಸಲಾಗಿದೆ. ಇದರ ಜೊತೆಗೆ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಡೆಯಲಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.