ಬಿ.ಎನ್.ರಾಜು ಬಿಡುಗಡೆಗೆ ಆಗ್ರಹ 

ಶಿವಮೊಗ್ಗ : ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಅವರನ್ನ ನ್ಯಾಯಾಂಗ ಬಂಧನದಲ್ಲಿ ಇಟ್ಟಿರುವುದನ್ನ ಖಂಡಿಸಿ ಹಾಗೂ ಅವರನ್ನ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ.

ಹಾಗೆಯೇ ಈ ಕುರಿತು ಮಾಧ್ಯಮಗೋಷ್ಠಿ ನಡೆಸಿರುವ ಮಾನವ ಹಕ್ಕುಗಳ ಹೋರಾಟ ಸಮಿತಿಯು, ನಮ್ಮ ಅಧ್ಯಕ್ಷರ ವಿರುದ್ಧ ಸುಳ್ಳು ಮೊಕ್ಕದ್ದಮೆ ಹೂಡಿ, ನ್ಯಾಯಾಂಗ ಬಂಧನದಲ್ಲಿಟ್ಟಿರುವುದು ಖಂಡನೀಯ. ಹೀಗಾಗಿ ಅವರನ್ನ ಕೂಡಲೇ ಬಿಡುಗಡೆ ಮಾಡಬೇಕು. ಅಲ್ಲದೆ ಕರ್ತವ್ಯ ಲೋಪವೆಸಗಿರುವ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸದ್ದಾರೆ.