ಶಿವಮೊಗ್ಗ : ಎಂಇಎಸ್ ಹಾಗೂ ಶಿವಸೇನೆಯನ್ನ ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ನಾರಾಯಣ ಗೌಡರ ಆದೇಶದಂತೆ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿಯೂ ನಾವು ಪ್ರತಿಭಟನೆ ನಡೆಸಿ ಎಂಇಎಸ್ ಹಾಗೂ ಶಿವಸೇನೆಯಯನ್ನ ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಹೇಳಿದರು.