ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಸುಧಾರಣೆ ಮಾಡುವ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದೀನ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣ ಕೌಶಲ್ಯ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ, ಗ್ರಾಮ ಜ್ಯೋತಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಇದರ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.ಸಭೆ ಬಳಿಕ ಬಗರ್‌ಹುಕುಂ ಅರ್ಜಿಗಳ ತಿರಸ್ಕಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಪೃಕೃತಿಯು ಉಳಿಯಬೇಕು ಜೊತೆಗೆ ಜನಜೀವನವು ಉಳಿಯಬೇಕು. ಹೀಗಾಗಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.