ಶಿವಮೊಗ್ಗ : ಒಂದು ಕಡೆ ಯಾರ ವಿರೋಧವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ಅಗ್ನಿಫಥ್ ಯೋಜನೆ ಜಾರಿಗೆ ಪಟ್ಟು ಹಿಡಿದಿದೆ. ಸೇನೆ ಕೂಡ ಈಗಾಗಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಆದ್ರೆ ಇನ್ನೊಂದು ಕಡೆ ಕಾಂಗ್ರೆಸ್ ಯೋಜನೆಗೆ ತನ್ನ ವಿರೋಧವನ್ನು ಮುಂದುವರೆಸಿದೆ.
ಈ ಹಿನ್ನೆಲೆ ಕೈ ನಾಯಕರ ಸೂಚನೆಯಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಶಿವಪ್ಪನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಅಗ್ನಿಫಥ್ ಯೋಜನೆಯಲ್ಲಿ ನೇಮಕವಾಗಿ ನಾಲ್ಕು ವರ್ಷಗಳ ಬಳಕ ಆ ಯುವಕರ ಭವಿಷ್ಯವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.