ಯುಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ ಪ್ರತಿಭಟನೆ 

ಶಿವಮೊಗ್ಗ: ರೈತರ ಹತ್ಯೆ ಖಂಡಿಸಿ ಉತ್ತರಪ್ರದೇಶ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿAದ ಪ್ರತಿಭಟನೆ ನಡೆಸಲಾಯಿತು.

ಹತ್ಯೆಗೊಳಗಾದ ರೈತ ಕುಟುಂಬಗಳನ್ನು ಭೇಟಿಯಾಗಲು ಹೋದ ಅಖಿಲ ಭಾರತ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು, ಶಿವಪ್ಪ ನಾಯಕ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಾ ರೈತರನ್ನು ದಮನ ಮಾಡಲು ಹೊರಟ್ಟಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಜಿಲ್ಲಾ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.