ಶಿವಮೊಗ್ಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದೆ. ಭೂಮಿ, ವಸತಿ, ವಿದ್ಯಾರ್ಥಿ ವೇತನ, ಹಾಸ್ಟೆಲ್‌ಗಳ ಸೌಲಭ್ಯ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿ, ನಾಗರೀಕ ಹಕ್ಕು ಜಾರಿ ದಳಕ್ಕೆ ರಕ್ಷಣಾತ್ಮಕ ಅಧಿಕಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.
ಇದ್ರ ಜೊತೆಗೆ ಶಿವಮೊಗ್ಗದಲ್ಲಿರುವ ದಲಿತ ಸಮಾಜದ ಜನರಿಗೆ ಅನುಕೂಲವಾಗುವಂತೆ ಕೆಲ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರಗಳು ಬಂದರು ಕೂಡ ದಲಿತರ ಸಂಕಷ್ಟಕ್ಕೆ ಪರಿಹಾರ ಸಿಕ್ಕಿಲ್ಲ. ಜನಪ್ರತಿನಿಧಿಗಳು ದಲಿತರ ಅಭಿವೃದ್ಧಿಯ ಹೆಸರಲ್ಲಿ ಕೋಟಿಗಟ್ಟಲೆ ಖರ್ಚು ಮಾಡುತ್ತೇವೆ ಎಂದು ವಂಚನೆಯ ಮಾತಗಳನ್ನು ಆಡುತ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.