ನಕಲಿ ಜಾತಿ ಪ್ರಮಾಣ ಸೃಷ್ಟಿಸಿ ಟೆಂಡರ್‌ನಲ್ಲಿ ಭಾಗಿ 

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ಆಡಳಿತದ ಮೂಲಕ ಗಣಿಗಾರಿಕೆಗೆ ಈ ಟೆಂಡರ್ ಮೂಲಕ ಅವಕಾಶ ನೀಡಲಾಗುದ್ದು, ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೀಸಲಾತಿ ನೀಡಲಾಗಿದೆ. ಆದ್ರೆ ಕೆಲವರು ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡಿ ಟೆಂಡರ್ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಇದರ ಹಿಂದೆ ಪ್ರಭಾವಿ ಸಚಿವರೊಬ್ಬರು ಶಾಮೀಲಾಗಿದ್ದಾರೆ.

ಹೀಗಾಗಿ ಈ ಟೆಂಡರ್ ಪ್ರಕ್ರಿಯೆಯನ್ನ ರದ್ದುಗೊಳಿಸಬೇಕು ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಿಸಾನ್ ಖೇತ್ ಮಜ್ದೂರ್ ಸಂಘಟನೆ ವತಿಯಿಂದ ಆಗ್ರಹಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.