ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಕೆಎಸ್‌ಈ 

ಬೆಂಗಳೂರು : ರಾಜ್ಯ ಬಜೆಟ್ ಅಧಿವೇಶನ ಸದ್ಯದಲ್ಲೇ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಉಮಾಮಹದೇವನ್, ಆಯುಕ್ತೆ ಶಿಲ್ಪನಾಗ್, ನಿರ್ದೇಶಕರಾದ ಶ್ರೀನಿವಾಸ ಮಾರಂಗಪ್ಪ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.