ಬೆಂಗಳೂರು: ಓಮಿಕ್ರಾನ್ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಸಲಿದ್ದಾರೆ.
ಓಮಿಕ್ರಾನ್ ವೈರಸ್ ಪರಿಣಾಮಕಾರಿ ಅಲ್ಲದಿದ್ದರೂ, ಮುಂಜಾಗ್ರತೆ ಅಗತ್ಯ. ಹೀಗಾಗಿ ಶಾಲೆಗಳಿಗೆ ನೀಡಿರುವ ಮಾರ್ಗಸೂಚಿಯನ್ನು ಪರಿಷ್ಕರಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಸಚಿವ ನಾಗೇಶ್, ಮುಖ್ಯಮಂತ್ರಿಗಳು ಹಾಗೂ ತಜ್ಞರು, ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಶಾಲೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಯಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.