ಶಿಕಾರಿಪುರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೆಲಸದ ಸಮಯದಲ್ಲಿ ಕೇರಂ, ಚೆಸ್ ಆಟಗಳನ್ನು ಆಡುತ್ತಾ ಮೋಜು-ಮಸ್ತಿ ಮಾಡ್ತಾರೆ. ಅಲ್ಲದೆ ಆಸ್ಪತ್ರೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ಶಿಕಾರಿಪುರ ತಾಲೂಕು ಘಟಕ ಆರೋಪಿಸಿದೆ.
ವೈದ್ಯರು ರೋಗಿಗಳ ಬಗ್ಗೆ ನಿರ್ಲಕ್ಷö್ಯ ತೋರುವುದಲ್ಲದೆ, ದುರ್ನಡತೆಯಿಂದ ವರ್ತಿಸುತ್ತಾರೆ. ಔಷಧಿಗಳಲ್ಲಿ ಅವ್ಯವಹಾರ ನಡೀತಿದೆ ಹಾಗೂ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನೂ ಕಾಪಾಡಿಕೊಂಡಿಲ್ಲ. ಆಸ್ಪತ್ರೆಯ ಆವರಣದಲ್ಲಿಯೇ ಖಾಸಗಿ ಮೆಡಿಕಲ್ ಸ್ಟೋರ್‌ಗಳ ಹಾವಳಿ ಹೆಚ್ಚಾಗಿದೆ ಎಂದು ವೇದಿಕೆ ಸದಸ್ಯರು ಆರೋಪಿಸಿದ್ದಾರೆ. ಈ ಹಿನ್ನೆಲೆ ಅಂತಹ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಂಡು, ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬAಧ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.