ಕೆರೆ ಅಭಿವೃದ್ಧಿ ಯೋಜನೆಗೆ ಸಚಿವ ಕೆ.ಎಸ್.ಈ ಚಾಲನೆ

ಶಿವಮೊಗ್ಗ : ನಗರದ ಬೊಮ್ಮನಕಟ್ಟೆ ಕೆರೆಯ ಸಮಗ್ರ ಅಭಿವೃದ್ಧಿ ಯೋಜನೆಗೆ ಗ್ರಾಮೀಣಾಭೀವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ಸುನೀತ ಅಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ. ಕಾಂತೇಶ್, ಸುಡಾ ಅದ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಹಾಗೂ ಇನ್ನಿತರರು ಸಚಿವರಿಗೆ ಸಾತ್ ಕೊಟ್ಟರು. ಅಂದ್ಹಾಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನದಲ್ಲಿ ಈ ಯೋಜನೆ ನಡೆಯಲಿದೆ.