ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು : ಕೆ.ಬಿ.ಪ್ರಸನ್ನಕುಮಾರ್ ಆಗ್ರಹ

ಶಿವಮೊಗ್ಗ : ಶಿವಮೊಗ್ಗದಲ್ಲಿ ಶಾಂತಿ ಕದಡುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರಪ್ಪನವರು ರಾಷ್ಟ್ರದ್ರೋಹಕ್ಕೆ ಸಮಾನಾದ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಸಚಿವರ ಇಂತಹ ನಡವಳಿಕೆ ಖಂಡನೀಯ ಎಂದರು. ಹರ್ಷ ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಹರ್ಷಗೆ ಜೀವಬೆದರಿಕೆ ಇದ್ದರೂ ಆತನಿಗೆ ರಕ್ಷಣೆ ಕೊಟ್ಟಿಲ್ಲ. ಹರ್ಷ ಸಾವಿನ ಮೆರವಣಿಗೆ ವೇಳೆ ಆದ ನಷ್ಟವನ್ನು ಸರ್ಕಾರ ಭರಿಸಬೇಕು. ಹರ್ಷ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಬೇಕು ಹಾಗೂ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಕೆ.ಶಾಮಸುಂದರ್, ದೀಪಕ್ ಸಿಂಗ್, ರಘು, ವೆಂಕಟೇಶ್ ಉಪಸ್ಥಿತರಿದ್ದರು.