ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಎಲ್ಲರೂ ತಿಳಿಯಬೇಕು: ಡಿಸಿ 

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು.

ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರಿಯಾಗಿ ಮಾರ್ಗದರ್ಶನ ಮಾಡುವ ಕಾರ್ಯವನ್ನು ಮಾಡಬೇಕಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಕ್ಕಳ ದತ್ತು ಸ್ವೀಕಾರ ಪ್ರಕ್ರಿಯೆಯಂತಹ ಕಾಯ್ದೆಗಳ ಬಗ್ಗೆ ಸರಿಯಾಗಿ ಅರಿವು ಇಲ್ಲದೆ, ಹಲವಾರು ಮಂದಿ ಸಮಸ್ಯೆಗೆ ತುತ್ತಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ, ಡಿವೈಎಸ್‌ಪಿ ಸಂತೋಷ್, ಡಿಡಿಪಿಯು ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.