ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಹೂ ಗುಚ್ಚ ಕೊಡುವ ಮೂಲಕ ಬೀಳ್ಕೊಡಲಾಗಿದೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಆರ್.ಪ್ರಸನ್ನಕುಮಾರ್ ಈ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋತಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ ೫ರಂದು ಇವರ ಅಧಿಕಾರದ ಅವಧಿ ಮುಗಿಯಲಿದೆ. ಹೀಗಾಗಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಪಾಲಿಕೆಯ ಸಾಮನ್ಯ ಸಭೆಯಲ್ಲಿ ಇವರಿಗೆ ಬೀಳ್ಕೊಡಲಾಗಿದೆ.