ಆರೋಗ್ಯಕರ ಜೀವನ ಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರ

 ಶಿವಮೊಗ್ಗ : ಪಿಇಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ, ಆರೋಗ್ಯಕರ ಜೀವನ ಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರಿಕರ ರಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರ ನಡೆಯಿತು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಡಿವೈಎಸ್‌ಪಿ ಪ್ರಶಾಂತ್ ಜಿ. ಮುನ್ನೋಳಿ ಹಾಗೂ ಮನೋ ವೈದ್ಯೆ ಡಾ. ಸುಬ್ರತಾ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.