ರೈತ ಹೋರಾಟಗಾರ ರಾಕೇಶ್ ಟಿಕಾಯತ್‌ಗೆ ಮುಖಕ್ಕೆ ಮಸಿ

ಬೆಂಗಳೂರು : ಭಾರತ ಕಿಸಾನ್ ಯೂನಿಯನ್‌ನ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದಿರುವ ಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅದಾದ ನಂತರ ರಾಕೇಶ್ ಟಿಕಾಯತ್ ಮೇಲೆ ಕೋಡಿಹಳ್ಳಿ ಚಂದ್ರಶೇಖರ್ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಹೀಗಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರೆಸ್‌ಮೀಟ್ ಮಾಡುತ್ತಿದ್ದಾಗ ಭಾರತ ರಕ್ಷಣೆ ಸೇನೆಯ ಭರತ್ ಶೆಟ್ಟಿ ತಂಡ ಮಸಿಬಳಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಕೇಶ್ ಟಿಕಾಯತ್, ಮಸಿ ಬಳಿದವರು ಯಾರು ಎಂಬುದು ಗೊತ್ತಿಲ್ಲ. ಆದರೆ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ. ಈಗಾಗಲೇ ಮಸಿ ಬಳಿದಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಎರಡೂ ಬಣದ ರೈತರು ಗಾಂಧಿ ಭವನದಲ್ಲಿದ್ದ ಕುರ್ಚಿಯನ್ನೇ ತೆಗೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.