ಶಿವಮೊಗ್ಗ : ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವವರನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಒಕ್ಕಲೆಬಿಸುತ್ತಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಡಬ್ಬಲ್ ಇಂಜಿನ್ನ ಸರ್ಕಾರ ಹೊಸ ಕಾನೂನು ತಂದು ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಲಿ. ಬಗಕರ್‌ಹುಕುಂ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ರೈತರಿಗೆ ಸರಿಯಾಗಿ ವಿದ್ಯತ್ ಪೂರೈಕೆ ಮಾಡುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಿದೆ. ರೈತರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಮಾರ್ಚ್ ೧೪ರಂದು ಸೊರಬದಲ್ಲಿ ಬೃಹತ್ ರೈತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.