ಮುಪ್ಪಾನೆ ಪ್ರಕೃತಿ ಶಿಬಿರದಲ್ಲಿ ಕಪ್ಪೆ ಹಬ್ಬ ಆಯೋಜನೆ

ಶಿವಮೊಗ್ಗ : ಪಶ್ಚಿಮಘಟ್ಟದ ವಿಶಿಷ್ಟ ಜೀವಪ್ರಭೇದವಾದ ಕಪ್ಪೆಗಳ ಕುರಿತು ಹೊಸ ತಲೆಮಾರಿನಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಶಿವಮೊಗ್ಗ ವನ್ಯಜೀವಿ ವಲಯ ಇದೇ ಮೊದಲ ಬಾರಿಗೆ ಕಪ್ಪೆ ಹಬ್ಬ ಆಯೋಜಿಸಿದೆ. ವನ್ಯಜೀವಿ ವಲಯದ ಡಿಸಿಎಫ್ ಐ.ಎಂ. ನಾಗರಾಜ್ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.

 ರಾಜ್ಯದಲ್ಲೇ ಮೊದಲ ಬಾರಿಗೆ ಕಪ್ಪೆಗಳ ಕುರಿತು ಇಂತಹದ್ದೊಂದು ಹಬ್ಬವನ್ನು ಶಿವಮೊಗ್ಗ ವನ್ಯಜೀವಿ ವಿಭಾಗ ಸಾಗರ ತಾಲೂಕಿನ ಮುಪ್ಪಾನೆ ಪ್ರಕೃತಿ ಶಿಬಿರದಲ್ಲಿ ನಡೆಸಲಿದ್ದು, ಇದೇ ಡಿಸೆಂಬರ್ ೧೮ ಮತ್ತು ೧೯ರಂದು ಎರಡು ದಿನಗಳ ಕಾಲ ನಡೆಯುವ ಕಪ್ಪೆ, ಹಬ್ಬದಲ್ಲಿ ಉಭಯವಾಸಿಗಳ ಕುರಿತು ಪರಿಣಿತರ ವಿಚಾರ ಮಂಡನೆ, ಸಂವಾದ, ಸಾಕ್ಷ ಚಿತ್ರ ಮತ್ತು ಛಾಯಾಚಿತ್ರ ಪ್ರದರ್ಶನ, ಫ್ರಾಗ್ ವಾಕ್ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಬ್ಬವನ್ನ ರಾಜ್ಯ ಅರಣ್ಯ ಪಡೆಯ  ಮುಖ್ಯಸ್ಥರಾದ ಪಿಸಿಸಿಎಫ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.