ಪೊಲೀಸ್ ಠಾಣೆಗಳಲ್ಲಿನ ಖಾಲಿ ಹುದ್ದೆ ಭರ್ತಿಗೆ ಆಗ್ರಹ 

ಶಿವಮೊಗ್ಗ: ರಾಜ್ಯ ಸೇರಿದಂತೆ ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ನಗರದಲ್ಲಿ ವ್ಯಾಪಕವಾಗಿ ಅಪರಾಧ ಪ್ರಕರಣಗಳು ನಡೆಯುತ್ತಿವೆ. ಗಾಂಜಾ ಸರಗಳ್ಳತನ, ಕೊಲೆ, ದರೋಡೆ, ವಾಹನ ಕಳ್ಳತನ, ಮನೆಗಳ್ಳತನ ಪ್ರಕರಣಗಳು ಹೆಚ್ಚುತ್ತಿವೆ.

ಹಾಗಾಗಿ ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಅಪರಾಧ ಪ್ರಕರಣಗಳನ್ನು ತಡೆಯುವಂತೆ ಶಿವಮೊಗ್ಗ ಪೀಸ್ ಆರ್ಗನೈಜೇಶನ್ ಆಗ್ರಹಿಸಿದೆ.

ಶಿವಮೊಗ್ಗದ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಹೆಚ್ಚಾಗಿದೆ. ಠಾಣೆಗಳ ಸರಹದ್ದು ದೊಡ್ಡದಿರುವ ಕಾರಣ ಅಪರಾಧ ಪ್ರಕರಣಗಳನ್ನು ತಡೆಯಲು ವರಿಷ್ಠಾಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗ್ತಿದೆ. ಹಾಗಾಗಿ ಕೂಡಲೇ ಖಾಳಿ ಹುದ್ದೆಗಳನ್ನು ಭರ್ತಿ ಮಾಡಿ ಅಪರಾಧ ತಡೆಯುವಂತೆ ಸಂಘಟನೆಯ ಪ್ರಮುಖರು ಮನವಿ ಮಾಡಿದ್ದಾರೆ.