ಶಿವಮೊಗ್ಗ : ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ರಾತ್ರಿ ಗಾಂಧಿ ಬಜಾರ್‌ನ ಬಟ್ಟೆ ಮಾರ್ಕೇಟ್‌ನಲ್ಲಿ ನಡೆದಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್‌ಪಿ ಲಕ್ಷ್ಮೀಪ್ರಸಾದ್, ಘಟನೆ ಕುರಿತಾಗಿ ದೂರು ದಾಖಲಾಗಿದ್ದು, ಕೊಲೆ ಯತ್ನ ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಜೋಗಿ ಸಂತೋಷ್, ರಮೇಶ್, ಲೋಕೆಶ್ ಹಾಗೂ ಅಪರಿಚಿತ ವ್ಯಕ್ತಿಯೊಬ್ಬನ ಮೇಲೆ ದೂರು ನೀಡಲಾಗಿದೆ.
ಹಳೆಯ ವೈಷಮ್ಯವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಇಬ್ಬರ ನಡುವೆ ಹಣಕಾಸು ವ್ಯವಹಾರಕ್ಕೆ ಸಂಬಂಧಸಿದಂತೆ ಆಗಾಗ ಗಲಾಟೆಗಳು ನಡೆಯುತ್ತಿದ್ದು, ಇದೀಗ ಸಂತೋಷ್ ಎಂಬಾತನು ಚಾಕುವಿನಿಂದ ಇರಿದಿದ್ದಾನೆ. ಸದ್ಯ ಆರೋಪಿಗಳ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.