ಶಿವಮೊಗ್ಗ: ೨೦೨೦ ಮತ್ತು ೨೧ನೇ ಸಾಲಿನಲ್ಲಿ ಅತಿ ಹೆಚ್ಚು ಮಳೆಯಾಗಿರುವುದರಿಂದ ಅತಿವೃಷ್ಟಿ ಸಂಭವಿಸಿದ್ದು, ಸಾಕಷ್ಟು ಬಡವರು ಮನೆಗಳನ್ನು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಹಾಗಾಗಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವ ಬಡವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್‌ನ ವೇದಾ ವಿಜಯಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಕನಿಷ್ಠ ೫ ಲಕ್ಷ ರೂಪಾಯಿ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಇದು ಕೇವಲ ಬಡವರ ಕಣ್ಣೊರೆಸುವ ತಂತ್ರವಾಗಿದ್ದು, ಯಾವುದೇ ಸಹಾಯ ಮಾಡಿಲ್ಲ. ಬಡವರನ್ನು ಬೀದಿಯಲ್ಲಿ ಮಲಗುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ೧೦ ವರ್ಷಗಳ ಹಿಂದೆ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣಕ್ಕೆಂದು ಜಮೀನು ನೀಡಿರುವ ರೈತರಿಗೆ ಸರ್ಕಾರ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಅವು ಕಳಪೆ ಗುಣಮಟ್ಟದಿಂದ ಕೂಡಿದ್ದು, ಅತಿಯಾಗಿ ಮಳೆ ಬಂದಾಗ ಸೋರುತ್ತಿವೆ. ಕೂಡಲೇ ಸರ್ಕಾರ ಗಮನಹರಿಸಿ ಈ ಮನೆಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.